ಬಿಜೆಪಿ ಟಿಕೆಟ್ ಕೊಡಿಸುವಾಗಿ ಹೇಳಿ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರನ್ನು ವಂಚಿಸಿತ್ತು. ಈ ಪ್ರಕರಣದಲ್ಲಿ ಪ್ರಭಾವಿಗಳ ಹೆಸರುಗಳು ಕೂಡ ಕೇಳಿಬರುತ್ತಿವೆ. ಅದರಂತೆ, ಯುವ ಬ್ರಿಗೇಡ್ ಸಂಘಟನೆ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೆಸರು ಕೂಡ ತಳುಕು ಹಾಕಿಕೊಂಡಿದೆ. ಈ ಬಗ್ಗೆ ಸ್ವತಃ ಸೂಲಿಬೆಲೆ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.
ಹಣ ಪಡೆದು ವಂಚನೆ ಎಸಗಿದ ಚೈತ್ರಾ ಕುಂದಾಪುರ ಪ್ರಕರಣದಲ್ಲಿ ನನ್ನ ಹೆಸರು ನೇರವಾಗಿ ಬಂದಿಲ್ಲ. ನನ್ನ ಬಳಿ ಈ ವಿಚಾರ ಪ್ರಸ್ತಾಪ ಮಾಡಿದ್ದೇನೆಂದು ವಜ್ರದೇಹಿಶ್ರೀ ಹೇಳಿದ್ದಾರೆ. ಪ್ರಕರಣದ ಬಗ್ಗೆ ನನಗೆ ಮೂರು ತಿಂಗಳ ಹಿಂದೆಯೇ ಗೊತ್ತಿತ್ತು ಎಂದಿದ್ದಾರೆ ಯುವ ಬ್ರಿಗೇಡ್ ಸಂಘಟನೆ ಸಂಸ್ಥಾಪಕ.