ಕರ್ನಾಟಕದ ಕಾಂಗ್ರೆಸ್ ಸರ್ಕಾರ 100 ದಿನದಲ್ಲಿ 4 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ, ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಹೇಳುತ್ತಿದೆ. ಆದರೆ ಪ್ರತಿಪಕ್ಷ ಬಿಜೆಪಿ ಹೇಳುವ ಪ್ರಕಾರ ಕಾಂಗ್ರೆಸ್ ಇಂದು ಕರ್ನಾಟಕಕ್ಕೆ ಮಹಾ ದ್ರೋಹವೆಸಗುತ್ತಿದೆ.
ಶುಕ್ರವಾರ ಕರ್ನಾಟಕ ಬಿಜೆಪಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕೆ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಕರ್ನಾಟಕಕ್ಕೆ ಎಸಗುತ್ತಿರುವ ಮಹಾ ದ್ರೋಹದ ಪಟ್ಟಿಯನ್ನು ನೀಡಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿದೆ.
ಬಿಜೆಪಿ ಟ್ವೀಟ್
ಬಿಜೆಪಿ ತನ್ನ ಟ್ವೀಟ್‌ನಲ್ಲಿ, ಕಾವೇರಿಯನ್ನು ತಮಿಳುನಾಡಿಗೆ ಬಿಟ್ಟು ಕನ್ನಡಿಗರ ಮಾನವನ್ನು ಕಾಂಗ್ರೆಸ್ ಸರ್ಕಾರ ಹರಾಜು ಹಾಕಿದೆ. ಚುನಾವಣೆಗೂ ಮುನ್ನ ಕನ್ನಡಿಗರ ಆಸ್ಮಿತೆಯನ್ನು ಮುಂದೆ ಇಟ್ಟುಕೊಂಡು ಒಣ ರಾಜಕೀಯ ಮಾಡಿದ್ದ ಕಾಂಗ್ರೆಸ್ ಇಂದು ಕರ್ನಾಟಕಕ್ಕೆ ಮಹಾ ದ್ರೋಹವೆಸಗುತ್ತಿದೆ’ ಎಂದು ದೂರಿದೆ.
ಆಗ
* ಸೇವ್ ನಂದಿನಿ ಅಂತ ಸುಳ್ಳು ಸುದ್ದಿ ಸೃಷ್ಟಿಸಿ ಕನ್ನಡಿಗರ ದಾರಿ ತಪ್ಪಿಸಲಾಯಿತು..!
* ಹಿಂದಿ ಹೇರಿಕೆಯೆಂದು ಹುಸಿ ಪುಕಾರು ಹಬ್ಬಿಸಿ ಪ್ರಚಾರ ಗಿಟ್ಟಿಸಿಕೊಳ್ಳಲಾಯಿತು..!
* ಮೇಕೆದಾಟು ವಿಚಾರ ನ್ಯಾಯಾಲಯದಲ್ಲಿದ್ದರೂ ಪಾದಯಾತ್ರೆಯ ನಾಟಕ ಮಾಡಲಾಯಿತು..!
ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಒಂದು ಕಡೆ ಬರಗಾಲ ಮತ್ತೊಂದು ಕಡೆ ಸುಪ್ರೀಂಕೋರ್ಟ್ ಆದೇಶ ಪಾಲನೆ ಅನಿವಾರ್ಯವಾಗಿದೆ. ಕಾನೂನು ಹೋರಾಟ ಮಾಡುತ್ತೇವೆ ಎಂದು ಸರ್ಕಾರ ಹೇಳುತ್ತಲೇ ಇದೆ. ಇದೆಲ್ಲವೂ ನೀರಿನಲ್ಲಿ ಹೋಮ ಮಾಡಿದಂತಾಗಿದೆ ಎಂದು ಹೇಳಿರುವ ರಾಜ್ಯ ಬಿಜೆಪಿ.