ಬೆಂಗಳೂರು ಬಂದ್ಗೆ ಪೊಲೀಸರು ಫುಲ್ ಅಲರ್ಟ್ ಆಗಿದ್ದು, ಗಲ್ಲಿ ಗಲ್ಲಿಯಲ್ಲೂ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ಧಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಟೈಟ್ ಸೆಕ್ಯೂರಿಟಿ ನೀಡಲಾಗುತ್ತಿದ್ದು, 60 KSRP, 40 CRPF ಪಡೆ ನಿಯೋಜನೆ ಮಾಡಲಾಗಿದೆ.
ಬೆಂಗಳೂರು ನಗರದಲ್ಲಿ ಮಧ್ಯರಾತ್ರಿ 12 ಗಂಟೆಯಿಂದಲೇ 144 ಸೆಕ್ಷನ್ ಜಾರಿಯಾಗಿದ್ದು, ಬೃಹತ್ ಮೆರವಣಿಗೆ ನಡೆಸದಂತೆ ಕಮಿಷನರ್ ಆದೇಶ ಹೊರಡಿಸಿದ್ದಾರೆ.
ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡಲು ಅವಕಾಶವಿದೆ. ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸುವಂತಿಲ್ಲ. ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಸೂಚನೆ ನೀಡಿದ್ದಾರೆ. ಟೌನ್ ಹಾಲ್ ಬಳಿ 250ಕ್ಕೂ ಹೆಚ್ಚು ಪೊಲೀಸರ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆಯೆಂದು ಹೇಳಲಾಗಿದೆ.