ಹೊಸ ಬಾರ್ ಲೈಸನ್ಸ್ ಕೊಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ಡಿ.ಕೆ ಶಿವಕುಮಾರ್ ಎಲ್ಲೂ ಕೂಡ ಹೊಸ ಲೈಸನ್ಸ್ ಕೊಡುತ್ತೇವೆ ಅಂತಾ ಹೇಳಿಲ್ಲ. ಸದ್ಯಕ್ಕೆ ಆ ವಿಚಾರದಲ್ಲಿ ಯಾವ ಚರ್ಚೆಗಳು ಬೇಡ. ಜನರ ಭಾವನೆಗಳನ್ನು ಕೇಳಬೇಕು, ಗೌರವಿಸಬೇಕು. ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಹೊಸ ಲೈಸನ್ಸ್ಗಳು ಯಾವುದು ಇಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಮಹಿಷ ದಸರವನ್ನ ಸರ್ಕಾರ ಮಾಡಿಲ್ಲ. ನಾವು ಹಿಂದೆಯೂ ಮಾಡಿಲ್ಲ ಈಗಲೂ ಮಾಡುತ್ತಿಲ್ಲ. ಅವರು ಯಾರೋ ಹಿಂದಿನಿಂದ ಮಹಿಷ ದಸರಾ ಮೈಸೂರಿನಲ್ಲಿ ಮಾಡುತ್ತಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಏನು ಮಾಡಿಲ್ಲ. ಈಗ ಆ ವಿಚಾರದಲ್ಲಿ ಜಿಲ್ಲಾಡಳಿತ ತೀರ್ಮಾನ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.
ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ನಾನು ಈ ವಿಚಾರದಲ್ಲಿ ಯಾವ ಪ್ರತಿಕ್ರಿಯೆಯನ್ನು ನೀಡಲ್ಲ. ಸಿಎಂ ಶಾಮನೂರು ಲಿಂಗಾಯತ ಹೇಳಿಕೆಯಿಂದ ದೂರ ಉಳಿದಿದ್ದಾರೆ.