ಬೆಳಗಾವಿಯಲ್ಲಿ ಸರ್ಕಾರಿ ನೌಕರರೇ ಸರ್ಕಾರಿ ಕಚೇರಿಯಲ್ಲಿ ಮೊಜು ಮಸ್ತಿ ಮಾಡಿರೋ ವಿಡಿಯೋ ವೈರಲ್ ಆಗಿದೆ. ಬೆಳಗಾವಿಯ ಡಿಹೆಚ್ಓ ಕಚೇರಿ ಆವರಣದಲ್ಲಿ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿ ಮೋಜು ಮಸ್ತಿಯಲ್ಲಿ ಮುಳುಗಿದ್ದಾರೆ.
ಈ ದೃಶ್ಯ ವೈರಲ್ ಆಗುತ್ತಿದ್ದಂತೆಯೇ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಸೂಕ್ತ ತನಿಖೆಗೆ ಆಗ್ರಹ ಮಾಡಿದ್ದಾರೆ.
ಮಹಾತ್ಮ ಗಾಂಧಿ ಫೋಟೋ ಎದುರೇ ಕುಡಿದು, ಕುಣಿದು ಕುಪ್ಪಳಿಸಿದ್ದಾರೆ ಅಲ್ಲಿನ ಸಿಬ್ಬಂದಿ. ಕುಡಿದ ನಶೆಯಲ್ಲಿ ಹಾಡು, ಡ್ಯಾನ್ಸ್ , ಹರಟೆ ಮಾಡಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಾರ್ಟಿಯಲ್ಲಿ ಡಿಎಚ್ಓ ಕಾರು ಚಾಲಕ ಮಂಜುನಾಥ ಪಾಟೀಲ್, ಮಹೇಶ ಹಿರೇಮಠ ಸೇರಿ 6 ಮಂದಿ ಇದ್ದರು ಎನ್ನಲಾಗಿದೆ. ಪರಿಶೀಲನೆ ನಡೆಸಿ ಕ್ರಮ ಜರುಗಿಸುವುದಾಗಿ DHO ಡಾ.ಮಹೇಶ್ ಕೋಣಿ ಮಾಹಿತಿ ನೀಡಿದ್ದಾರೆ