ನವದೆಹಲಿ : ಈ ಬಾರಿಯ ಲೋಕಸಭಾ ಚುನಾವಣಾ ಸಮರದಲ್ಲಿ ದೇಶದ ಅತ್ಯಂತ ಪ್ರತಿಷ್ಠೆಯ ಕಣವಾದ ಪ್ರಧಾನಿ ನರೇಂದ್ರ ಮೋದಿ ಅವರ ಸ್ವ ಕ್ಷೇತ್ರದಿಂದ ಪ್ರಿಯಾಂಕ ವಾದ್ರಾ ಕಾಂಗ್ರೆಸ್ ಅಭ್ಯರ್ಥಿಯಾಗ್ತಾರೆ ಅನ್ನುವ ಸುದ್ದಿಗಳು ಹರಿದಾಡಿತ್ತು.
ಆದರೆ ಇದೀಗ ಪ್ರಿಯಾಂಕ ವಾರಣಾಸಿಯಿಂದ ಸ್ಪರ್ಧಿಸುವುದಿಲ್ಲ ಎಂದು ಖಚಿತವಾಗಿದೆ. ಮೋದಿ ವಿರುದ್ಧ ಸೆಣಸಿ ಸೋತು ಮುಖಭಂಗ ಅನುಭವಿಸಿದರೆ ಕಷ್ಟ ಎಂದು ಪ್ರಿಯಾಂಕ ಅವರನ್ನು ಕಣಕ್ಕಿಳಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ.
ಈ ಮೂಲಕ ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ಸ್ಪರ್ಧೆ ಮಾಡಲಿದ್ದಾರೆ ಅನ್ನುವ ಸುದ್ದಿಗೆ ಫುಲ್ ಸ್ಟಾಪ್ ಹಾಕಲಾಗಿದೆ.
ಇದೀಗ ವಾರಣಾಸಿ ಕ್ಷೇತ್ರದಿಂದ ಕಾಂಗ್ರೆಸ್ ಅಜಯ್ ರಾಯ್ ಅವರನ್ನು ಕಣಕ್ಕೆ ಇಳಿಸಲು ನಿರ್ಧರಿಸಿದೆ.
2014ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಮುಖಂಡ ಅರವಿಂದ್ ಕೇಜ್ರಿವಾಲ್ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಿಂದ ಸ್ಪರ್ಧೆ ಮಾಡಿ ಪರಾಭವಗೊಂಡಿದ್ದರು.