ವಾರಣಾಸಿ : ಮೋದಿ ಏನಾದರೂ ತಪ್ಪು ಮಾಡಿದರೂ ಕೂಡಾ ಮೋದಿ ಮನೆಯ ಮೇಲೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಲೇಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಶುಕ್ರವಾರ ನಾಮಪತ್ರ ಸಲ್ಲಿಸಿದ ಬಳಿಕ ಧಿಯಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಒಂದು ವೇಳೆ ನಾನೇನಾದರೂ ತಪ್ಪು ಮಾಡಿದ್ದರೆ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನನ್ನ ಮನೆಯ ಮೇಲೂ ದಾಳಿ ನಡೆಸಲಿ ಎಂದರು.
ಆದಾಯ ತೆರಿಗೆ ದಾಳಿ ನಂತರ ಕಾಂಗ್ರೆಸ್ ಮುಖಂಡರು ಹೇಳುತ್ತಾರೆ, ನಾವು ಜನಪ್ರತಿನಿಧಿಗಳು, ಹೀಗಾಗಿ ಯಾಕೆ ನಮ್ಮ ಮನೆ, ಕಚೇರಿ ಮೇಲೆ ದಾಳಿ ನಡೆಸಬೇಕು ಅಂತ? ದೇಶದ ಕಾನೂನು ಎಲ್ಲರಿಗೂ ಒಂದೇ ಅದು ನಾನಾಗಲಿ ಬೇರೆಯವರಾಗಲಿ ಎಲ್ಲರಿಗೂ ಅದು ಅನ್ವಯಿಸುತ್ತದೆ ಎಂದು ಪ್ರತಿಪಕ್ಷಗಳ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ.
ಈ ಹಿಂದೆ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರತಿಪಕ್ಷಗಳ ಹಲವು ಮುಖಂಡರು, ವಿಪಕ್ಷಗಳ ಆಪ್ತರ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವುದನ್ನು ವಿರೋಧ ಪಕ್ಷಗಳು ಟೀಕಿಸಿತ್ತು.