ಕಲಬುರಗಿ : ನಾಟಕ ಮಾಡೋದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಸ್ಟರ್ ಹಿರಣ್ಣಯ್ಯ ಅವರನ್ನು ಮೀರಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಚಿಂಚೋಳಿಯ ಐನೊಳ್ಳಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು ಸುಳ್ಳು ಹೇಳೋದರಲ್ಲಿ, ನಾಟಕ ಮಾಡೋದರಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರನ್ನು ಮೋದಿ ಮೀರಿಸುತ್ತಾರೆ.
ಮೋದಿ ಹೇಳುವುದೆಲ್ಲಾ ಬಂಡಲ್, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಣ ಜಮೆ ಮಾಡುತ್ತೇನೆ. ವಿದೇಶದಲ್ಲಿರುವ ಕಪ್ಪು ಹಣ ವಾಪಾಸ್ ತರುತ್ತೇನೆ ಎಂದು ಮೋದಿ ಹೇಳಿದ್ದರು. ಆದರೆ ಅದೇನೂ ಆಗೇ ಇಲ್ಲ, ಮೋದಿ ಮನೆ ಹಾಳಾಗ ಎಂದು ಕಿಡಿಕಾರಿದರು.
ಇದೇ ವೇಳೆ ಯಡಿಯೂರಪ್ಪ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ ಕೇವಲ ಮೂರು ದಿನ ಮುಖ್ಯಮಂತ್ರಿಯಾಗಿ ಮಾನ ಮರ್ಯಾದೆಯನ್ನು ಕಳೆದುಕೊಂಡಿರುವ ಯಡಿಯೂರಪ್ಪ ಒಬ್ಬ ಮಹಾನ್ ಸುಳ್ಳುಗಾರ. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕೆಂಬ ಅಧಿಕಾರದ ಲಾಲಸೆ ಹೊಂದಿದ್ದಾರೆ ಎಂದು ಟೀಕಿಸಿದರು.
ಶಾಸಕರ ಸಂಖ್ಯಾಬಲವನ್ನು ಹೊಂದಿದರಷ್ಟೇ ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಸಾಧ್ಯ. ಶಾಸಕರ ಖರೀದಿ ಮೂಲಕ ಮತ್ತೆ ಮುಖ್ಯಮಂತ್ರಿಯಾಗಬೇಕೆನ್ನುವ ಅಧಿಕಾರದ ದಾಹ ಯಡಿಯೂರಪ್ಪಗೆ ಹೆಚ್ಚಾಗಿದೆ. ಶಾಸಕರನ್ನು ಖರೀದಿ ಮಾಡುವಷ್ಟು ಹಣ ಯಡಿಯೂರಪ್ಪ ಅವರಿಗೆ ಎಲ್ಲಿಂದ ಬಂತು ಎಂದು ಇದೇ ವೇಳೆ ಅವರು ಪ್ರಶ್ನಿಸಿದರು.