ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾದ ಕಾಮಲೀಲೆಯ ಸಿಡಿಯ ತನಿಖೆಯನ್ನು ಎಸ್ಐಟಿ ಕೈಗೆತ್ತಿಕೊಂಡಿದೆ.
ತನಿಖೆ ಪ್ರಾರಂಭಿಸಿದ ಕೆಲವೇ ಗಂಟೆಗಳಲ್ಲಿ ಭರ್ಜರಿ ಭೇಟೆಯಾಡಿರುವ ಎಸ್ಐಟಿ ಪೊಲೀಸರು ಒಟ್ಟು 5 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಇದೀಗ ಈ 5 ಮಂದಿಯ ವಿಚಾರಣೆ ನಡೆಸಿರುವ ಪೊಲೀಸರು ಸಿಡಿಯ ಮೂಲಕ್ಕೆ ಇಳಿಯಲು ನಿರ್ಧರಿಸಿದ್ದಾರೆ.
ಹೀಗಾಗಿ ವಶಕ್ಕೆ ಪಡೆದ 5 ಮಂದಿಗೂ ಸಿಡಿಗೂ ಇರುವ ನಂಟು, ಸಿಡಿ ಬಿಡುಗಡೆಗೆ ಬೆನ್ನೆಲುಬಾಗಿ ನಿಂತವರು ಯಾರು ಅನ್ನುವ ಕುರಿತಂತೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಈ ನಡುವೆ ಸಿಡಿಯಲ್ಲಿ ಇದ್ದಾಳೆ ಎನ್ನಲಾದ ಯುವತಿಯ ಗೆಳತಿಯನ್ನು ಪತ್ತೆ ಹಚ್ಚಿರುವ ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ.
ಇದೀಗ ಸಿಡಿಯಲ್ಲಿ ಕಾಣಿಸಿಕೊಂಡಿರುವ ಯುವತಿ ಪತ್ತೆಗೆ ಮುಂದಾಗಿರುವ ಪೊಲೀಸರು ಆಕೆ ನೆಲೆ ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ.
ಕೃಪೆ :ಟೊರೆಂಟ್ ಸ್ಪ್ರೀ ವೆಬ್