ಬೆಂಗಳೂರು: ರಾಜ್ಯ ಸರ್ಕಾರ ನಿನ್ನೆ ರಾತ್ರಿ ಹೊರಡಿಸಿರುವ ಹೊಸ ಮಾರ್ಗಸೂಚಿ ಪ್ರಕಾರ ಮೇ 4ರವರೆಗೆ ಅಗತ್ಯ ಸೇವೆಗಳ ಹೊರತುಪಡಿಸಿ ಉಳಿದೆಲ್ಲಾ ಅಂಗಡಿ ಮುಂಗಟ್ಟು, ವ್ಯಾಪಾರ ವಹಿವಾಟು ಬಂದ್ ಆಗಲಿದೆ.
ರಾತ್ರಿ 9 ರಿಂದ ಬೆಳಗ್ಗೆ 6ರವರೆಗಿನ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಬದಲಿಗೆ ಇಂದಿನಿಂದ ಮೇ 4ರವರೆಗೆ ಅಗತ್ಯ ಸೇವೆಗಳ ಹೊರತುಪಡಿಸಿ ಉಳಿದೆಲ್ಲವೂ ಬಂದ್ ಮಾಡಬೇಕೆಂದು ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಹೀಗಾಗಿ ರಾಜ್ಯದ ನಾನಾ ಭಾಗಗಳಲ್ಲಿ ಅಂಗಡಿಗಳನ್ನು ಮಚ್ಚಿಸಲಾಗುತ್ತಿದೆ.
ದಿನಸಿ, ಹಾಲು, ಬ್ಯಾಂಕ್, ಸರ್ಕಾರಿ ಕಚೇರಿ, ಕೈಗಾರಿಕೆಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಉಳಿದಂತೆ ಶಾಲೆ, ಕಾಲೇಜ್, ಟ್ಯೂಷನ್, ಕ್ಲಬ್, ಚಿನ್ನಾಭರಣ, ಬಟ್ಟೆ ಅಂಗಡಿಗಳು ಬಂದ್ ಆಗಲಿದೆ.
ಬಾರ್, ಹೋಟೆಲ್ಗಳಲ್ಲಿ ಪಾರ್ಸಲ್ಗಷ್ಟೇ ಅವಕಾಶ ನೀಡಲಾಗಿದೆ. ಹೇರ್ ಕಟ್ಟಿಂಗ್ ಶಾಪ್ಗಳು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಕಚೇರಿಗಳಲ್ಲಿ ಶೇ.50ರಷ್ಟು ಸಿಬ್ಬಂದಿ ಮಾತ್ರ ಕಾರ್ಯನಿರ್ವಹಿಸುವುದಕ್ಕೆ ಅವಕಾಶ ನೀಡಲಾಗಿದೆ.
ಸಾರಿಗೆ ಸಂಚಾರ ಎಂದಿನಂತೆ ಇರಲಿದೆ. ಆದರೆ 50%ರಷ್ಟು ಪ್ರಯಾಣಿಕರಿಗೆ ಮಾತ್ರ ಅಸನದ ವ್ಯವಸ್ಥೆಯಾಗಲಿದೆ. ಮದುವೆ ಸಮಾರಂಭಕ್ಕೆ 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು ಅಂತ್ಯಸಂಸ್ಕಾರದಲ್ಲಿ 20 ಜನರು ಮಾತ್ರ ಭಾಗವಹಿಸಬಹುದು.