24 ಗಂಟೆ ಒಳಗೇ ರಿಸಲ್ಟ್:
ಬೆಂಗಳೂರಿನಲ್ಲಿ ಈಗ ಪರೀಕ್ಷೆಯಾದ 24 ಗಂಟೆ ಒಳಗೇ ಫಲಿತಾಂಶ ಕೊಡಬೇಕು. ಬಿಯು ನಂಬರ್ ಜನರೇಟ್ ಆಗುವುದು ಕೂಡ ತಕ್ಷಣ ಆಗಬೇಕು. ರಾಜ್ಯದ ಉದ್ದಗಲಕ್ಕೂ ಹೀಗೆಯೇ ಆಗಬೇಕು. ರಾಜ್ಯದ ಸರಾಸರಿ ಪರಿಸ್ಥಿತಿ ನೋಡಿದರೆ ರಿಸಲ್ಟ್ ಬರಲು ನಾಲ್ಕೂವರೆ ದಿನದಿಂದ ಎರಡು ದಿನವಾಗುತ್ತಿದೆ. ಫಲಿತಾಂಶ ವಿಳಂಬದಿಂದ ಸೋಂಕು ಉಲ್ಬಣಿಸಿ ಹೆಚ್ಚು ಪ್ರಾಣನಷ್ಟ ಆಗುತ್ತಿದೆ ಎಂದು ಡಿಸಿಎಂ ಕಳವಳ ವ್ಯಕ್ತಪಡಿಸಿದರು.
ಸ್ಯಾಂಪಲ್ ಕಲೆಕ್ಟ್ ಮಾಡಿದ ಒಂದು ದಿನದೊಳಗೆ ವರದಿ ಕೊಡುವುದಕ್ಕೆ ಇರುವ ಅಡ್ಡಿಗಳನ್ನು ನಿವಾರಿಸಲು ಎಲ್ಲ ಕ್ರಮ ಕೈಗೊಳ್ಳಲಾಗುತ್ತದೆ. ತಡವಾಗಿ ರಿಸಲ್ಟ್ ಕೊಡುವ ಲ್ಯಾಬ್ಗಳಿಗೆ ಪ್ರತಿ ಟೆಸ್ಟ್ಗೆ 150 ರೂ. ದಂಡ ವಿಧಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಹೆಚ್ಚು ದರ ಸುಲಿಗೆ ಮಾಡಿದರೆ ಕ್ರಮ:
ಹೋಮ್ ಐಸೋಲೇಷನ್ ಪ್ರಮಾಣ ಹೆಚ್ಚುತ್ತಿರುವುದರಿಂದ ಪಲ್ಸಾಸ್ಕೋಮೀಟರ್ಗಳಿಗೆ ಡಿಮಾಂಡ್ ಜಾಸ್ತಿಯಾಗಿದೆ. ಮಾರುಕಟ್ಟೆಯಲ್ಲಿ ದುಬಾರಿ ಬೆಲೆಗೆ ಮಾರಲಾಗುತ್ತಿದೆ ಎಂಬ ಸರಕಾರಕ್ಕೆ ಬಂದಿದೆ. ಮೆಡಿಕಲ್ ಸ್ಟೋರ್ಗಳು ಆಗಿರಲಿ ಅಥವಾ ಇನ್ನಾರೇ ಆಗಿರಲಿ ಎಂಆರ್ಪಿಗಿಂತ ಹೆಚ್ಚು ಬೆಲೆಗೆ ಮಾರಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದು ಪ್ರತಿ ರೆಮಿಡಿಸಿವರ್ ಸೇರಿ ಪ್ರತಿಯೊಂದು ಔಷಧಕ್ಕೂ ಅನ್ವಯ ಆಗುತ್ತದೆ. ಜನರು 112 ಹೆಲ್ಪ್ಲೈನ್ ಕರೆ ಮಾಡಿದರೆ ಅಂಥ ತಪ್ಪಿತಸ್ಥರನ್ನೂ ಕೂಡಲೇ ಬಂಧಿಸಲಾಗುವುದು. ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಶಿಕ್ಷೆಗೊಳಪಡಿಸಲಾಗುವುದು ಎಂದು ಡಿಸಿಎಂ ಎಚ್ಚರಿಕೆ ನೀಡಿದರು.
ಸರಕಾರವು ದೊಡ್ಡ ಪ್ರಮಾಣದಲ್ಲಿ ಪಲ್ಸಾಸ್ಕೋಮೀಟರ್ಗಳನ್ನು ಖರೀದಿ ಮಾಡುತ್ತಿದೆ. ಪ್ರತೀ ಒಂದರ 350 ರೂ.ನಂತೆ ಕೊಡಲಾಗುತ್ತಿದೆ. ಹೀಗಿದ್ದರೂ ಜನರ ಅಗತ್ಯಕ್ಕಾಗಿ ಸರಕಾರ ಹೆಚ್ಚು ಪ್ರಮಾಣದಲ್ಲಿ ಕೊಳ್ಳುತ್ತಿದೆ ಎಂದರು ಅವರು.