ಚುನಾವಣಾ ಆಯೋಗ, ಸರ್ಕಾರ, ಎಲ್ಲ ರಾಜಕೀಯ ಪಕ್ಷಗಳು ಜಾಗ್ರತೆ ವಹಿಸಬೇಕಿತ್ತು. ಚುನಾವಣೆ ಮುಂದೂಡಬೇಕು ಎಂಬ ಸಲಹೆ ಇತ್ತಾದರೂ ಚುನಾವಣೆ ನಡೆಸುವುದು ಆಯೋಗದ ತೀರ್ಮಾನವಾಗಿತ್ತು. ನನ್ನನ್ನೂ ಸೇರಿ ನಾವು ರಾಜಕೀಯ ಪಕ್ಷದವರು ಸಾಮಾಜಿಕ ಅಂತರ ಕಾಪಾಡಲು ಸಾಧ್ಯವಾಗಲಿಲ್ಲ. ಇಂದು ಬಸವಕಲ್ಯಾಣದಲ್ಲಿ 42 ಜನ ಶಿಕ್ಷಕರು ಕೊರೋನಾದಿಂದ ಮೃತಪಟ್ಟಿರುವುದು ನಮ್ಮೆಲ್ಲರ ಅಪರಾಧ. ನಾವು ಜನ ಸಂಘಟನೆ, ಮತ ಪಡೆಯಬೇಕು ಎಂಬ ಅಮಲಿನಲ್ಲಿದ್ದೆವು. ಆದರೆ ಸರ್ಕಾರ ಚುನಾವಣೆ ಕೆಲಸ ಮಾಡಿದ ನಮ್ಮ ಶಿಕ್ಷಕ ವೃಂದಕ್ಕೆ ರಕ್ಷಣೆ ನೀಡಬಹುದಾಗಿತ್ತು.
ಇದಕ್ಕೆ ಚುನಾವಣೆ ನಡೆಸಿದ ಆಡಳಿತವೇ ಹೊಣೆ. ಸೋಂಕು ಹೆಚ್ಚುತ್ತಿದೆ, ಹೀಗಾಗಿ ಚುನಾವಣೆ ಮುಂದೂಡಿ ಎಂದು ಸರ್ಕಾರ ಹೇಳಿದ್ದರೆ, ಆಯೋಗ ಚುನಾವಣೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಕೆಲವರಿಗೆ ಆತುರವಾಗಿ ಚುನಾವಣೆ ಮಾಡಬೇಕಿತ್ತು. ಅದಕ್ಕೆ ಶಿಕ್ಷಕರನ್ನು ಬಲಿ ಕೊಟ್ಟಿದ್ದಾರೆ.