ಬೆಂಗಳೂರು, ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಎರಡು ಕಾರುಗಳಿಗೆ ಮನೆ ಮುಂದೆಯೇ ಬೆಂಕಿ ಹಚ್ಚಿರುವ ದುಷ್ಕರ್ಮಿಗಳು,
ಬುಧವಾರ ತಡರಾತ್ರಿ ಒಂದೂವರೆ ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸತೀಶ್ ರೆಡ್ಡಿ ಅವರ ಫಾರ್ಚೂನರ್ ಕಾರು ಹಾಗೂ ಮಹೀಂದ್ರ ಥಾರ್ ಜೀಪ್ ಸುಟ್ಟು ಹೋಗಿದೆ. ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದ್ದು, ನಾಲ್ಕು ಮಂದಿ ದುಷ್ಕರ್ಮಿಗಳು ಪೆಟ್ರೋಲ್ ಕ್ಯಾನ್ ಗಳನ್ನ ತಂದು ಬೆಂಕಿ ಹಚ್ಚಿರುವುದು ಕಂಡು ಬಂದಿದೆ. ಈಗಾಗಲೇ ಓರ್ವ ಶಂಕಿತ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.