ಮಕ್ಕಳ ಮೇಲೆ ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆಗಾಗಿ ರಾಜ್ಯ ಸರ್ಕಾರ ‘ಆರೋಗ್ಯ ನಂದನ’ ಹೆಸರಿನಲ್ಲಿ ಹೊಸ ಯೋಜನೆಯನ್ನು ಜಾರಿಗೆ ತಂದಿದ್ದು ಇದರ ಅಂಗವಾಗಿ ಇಂದು ಹೊನ್ನಾಳಿ ಪಟ್ಟಣದಲ್ಲಿ ‘ಆರೋಗ್ಯ ನಂದನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎಂ ಪಿ ರೇಣುಕಾಚಾರ್ಯ.
ಕೊರೋನಾ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಅಪಾಯಕಾರಿ ಆಗಲಿದೆ ಎಂದು ತಜ್ಞರು ವರದಿ ನೀಡಿರುವ ಹಿನ್ನೆಲೆಯಲ್ಲಿ ಪೋಷಕರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಮನವಿ ಮಾಡಿದರು.