‘ಅಫ್ಘಾನಿಸ್ತಾನ ವಿದ್ಯಾರ್ಥಿಗಳ ಪ್ರತಿನಿಧಿಗಳು ಬಂದು ನನ್ನ ಭೇಟಿ ಮಾಡಿದ್ದರು. ಅಲ್ಲಿನ ಘಟನೆಯಿಂದ ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ನಮ್ಮ ರಾಜ್ಯದಲ್ಲಿ ಅವರಿಗೆ ಧೈರ್ಯ ನೀಡಬೇಕು. ಅವರ ದೇಹ ಮಾತ್ರ ಇಲ್ಲಿದ್ದು, ಅವರ ಮನಸ್ಸು ಅಲ್ಲಿರುವ ಪೋಷಕರ ಮೇಲಿದೆ.
ಬೆಂಗಳೂರು ಶಿಕ್ಷಣ ಕೇಂದ್ರವಾಗಿದ್ದು, ಅನೇಕ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಇಲ್ಲಿನೆಲೆಸಿದ್ದಾರೆ. ಅವರಿಗೆ ಧೈರ್ಯ ತುಂಬಬೇಕು. ಧರ್ಮ ಯಾವುದೇ ಆಗಿರಲಿ, ಮಾನವೀಯತೆ ದೃಷ್ಟಿಯಿಂದ ಅವರಿಗೆ ಧೈರ್ಯ ತುಂಬಬೇಕು. ಅಫ್ಘಾನಿಸ್ತಾನದಲ್ಲಿರುವ ಕನ್ನಡಿಗರನ್ನು ವಾಪಸ್ ಕರೆತರುವುದು ಭಾರತ ಸರ್ಕಾರಕ್ಕೆ ಸಂಬಂಧಿಸಿದ ವಿಚಾರವಾಗಿದೆ ಎಂದರು.