ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸೆಲೆಬ್ರಿಟಿ ಮಾಡೆಲ್ ಸೋನಿಯಾ ಅಗರ್ವಾಲ್‍ಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಸೋನಿಯಾ ಆಗ್ರ್ಯಾನಿಕ್ ಕಾಸ್ಮೆಟಿಕ್ ಕಂಪನಿ ನಡೆಸುತ್ತಿದ್ದು, ಜೊತೆ ಡಜನ್‍ಗಟ್ಟಲೇ ಸೆಲೆಬ್ರಿಟಿಗಳ ಲಿಂಕ್ ಇರುವುದು ಗೊತ್ತಾಗಿದೆ. ಸ್ಯಾಂಡಲ್ವುಡ್ ಸೆಲೆಬ್ರೆಟಿಗಳೂ ಹಾಗೂ ಹಲವು ರಾಜಕಾರಣಿಗಳ ಮಕ್ಕಳು ಕೂಡಾ ಎಲ್ಲಾ ಪಾರ್ಟಿಗಳಲ್ಲಿ ಸೋನಿಯಾ ಅಗರ್ವಾಲ್ ಮುಖಾಂತರ ಎಂಟ್ರಿ ಕೊಡುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ.
ಕಲಬುರಗಿ ಕಾಂಗ್ರೆಸ್ ಮುಖಂಡ ಬಾಬುರಾವ್ ಪಾಟೀಲ್ ಮನೆ ಮೇಲೆ ED ದಾಳಿ..!
ಕಲಬುರಗಿ ಕಾಂಗ್ರೆಸ್ ಮುಖಂಡ ಬಾಬುರಾವ್ ಪಾಟೀಲ್ ಅವರ ಮನೆ ಮೇಲೆ ED ದಾಳಿ ನಡೆಸಿದ್ದು, ಚಿಂಚೋಳಿ ತಾಲೂಕಿನ ಚಂದಾಪುರ ಗ್ರಾಮದಲ್ಲಿ ರೇಡ್ ಮಾಡಿದೆ. ED ಅಧಿಕಾರಿಗಳು ಖಾಸಗಿ ಇನ್ನೋವಾ ಕಾರುಗಳಲ್ಲಿ ಬಂದಿದ್ದು, ಮಹತ್ವದ ದಾಖಲೆಯನ್ನು ವಶಕ್ಕೆ ಪಡೆದಿದ್ದಾರೆ...