*
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಕಾಂಗ್ರೆಸ್ ನಾಯಕರು ಗಂಭೀರವಾಗಿದ್ದರೆ, ಅಧಿಕಾರವಿದ್ದ ಸಂದರ್ಭದಲ್ಲೇ ಸಮಸ್ಯೆಯನ್ನು ಬಗೆಹರಿಸಬೇಕಿತ್ತು. ಹತ್ತು ವರ್ಷ ಅಧಿಕಾರದಲ್ಲಿದ್ದ *ಕಾಂಗ್ರೆಸ್ ಈ ವಿವಾದ ಬಗೆಹರಿಸಲು ಏನೂ ಮಾಡಿಲ್ಲ* ಎಂದರು.
ಮಹಾಜನ್ ಆಯೋಗದ ವರದಿಯಲ್ಲಿ ಗಡಿಗಳ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಆದರೂ ಮಹಾರಾಷ್ಟ್ರ ನಾಯಕರು ಹಾಗೂ ರಾಜಕೀಯ ಪಕ್ಷಗಳು ಪದೇ ಪದೆ ವಿವಾದ ಮಾಡುತ್ತಿದ್ದಾರೆ. ಇದರಲ್ಲಿ ವಿವಾದ ಮಾಡುವಂಥದ್ದು ಏನೂ ಇಲ್ಲ. ಈಗಾಗಲೇ ಕೇಂದ್ರ ಗೃಹ ಸಚಿವರು ಎರಡೂ ರಾಜ್ಯಗಳ ಸಭೆ ಕರೆದು ಸಮಿತಿ ರಚಿಸುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಯಾವುದೇ ವಿವಾದ ಮಾಡದೆ ಕಾಯಬೇಕು ಎಂದರು.