ಶ್ರೀಕ್ಷೇತ್ರ ಹೊರನಾಡಿನಲ್ಲಿ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಕೋಟಿ ಕುಂಕುಮಾರ್ಚನೆ ಹಾಗೂ ಲಕ್ಷದೂರ್ವಾರ್ಚನೆಯ ಸಂಕಲ್ಪವು ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯು ಧರ್ಮಕರ್ತ ದಂಪತಿಗಳಿಂದ ನೆರವೇರಿತು. ಈ ಹಿಂದಿನಿಂದಲೂ ಶ್ರೀಕ್ಷೇತ್ರಕ್ಕೆ ಬಂದು ಕುಂಕುಮಾರ್ಚನೆ ಸಂಕಲ್ಪ ಮತ್ತು ಅರ್ಚನೆಯಲ್ಲಿ ಭಾಗವಹಿಸಿದ ಎಲ್ಲಾ ಮಹಿಳೆಯರು ಕಾರ್ಯಕ್ರಮಕ್ಕೆ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಹಾಗೂ ಭಕ್ತಾದಿಗಳು ಕುಟುಂಬ ಸಮೇತರಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ವರಮಹಾಲಕ್ಷ್ಮೀ ದೇವಿಯ ಹಾಗೂ ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರೀ ಅಮ್ಮನವರ ಅನುಗ್ರಹಕ್ಕೆ ಪಾತ್ರರಾದರು.
ಸನಾತನ ಎಂದರೆ ಶಾಶ್ವತ ಎಂದರ್ಥ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಎಚ್ಚರಿಕೆಯಿಂದ ಹೇಳಿಕೆ ನೀಡಿದರೆ ಒಳಿತು: ನಿರ್ಮಲಾನಂದ ಸ್ವಾಮೀಜಿ
ಸನಾತನ ಎಂದರೆ ಶಾಶ್ವತ ಎಂದರ್ಥ, ಅಂದರೆ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತದೆ. ಅದೇ ಸನಾತನ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಎಚ್ಚರಿಕೆಯಿಂದ ಹೇಳಿಕೆ ನೀಡಬೇಕೆಂದು ಆದಿಚುಂಚನಗಿರಿಯ ಶ್ರೀನಿರ್ಮಲಾನಂದ...