- ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಬಗ್ಗೆ ವಿಧಾನ ಪರಿಷತ್ ಶಾಸಕ ದಿನೇಶ ಗೂಳಿಗೌಡ ಮಾಹಿತಿ
- ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಿಂದ ಚಾಲನೆ
*ಚುನಾವಣೆಗೂ ಪೂರ್ವ ಮೇ 9 ರಂದು ಚಾಮುಡೇಶ್ವರಿಯ ಮುಂದೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಕೆ.ಜೆ. ಜಾರ್ಜ್, ಶಾಸಕ ದಿನೇಶ್ ಗೂಳಿಗೌಡರಿಂದ ಗ್ಯಾರಂಟಿ ಅನುಷ್ಠಾನದ ಬಗ್ಗೆ ಪ್ರಮಾಣ
*ದೇವಿಯ ಮುಂದೆ ಗ್ಯಾರಂಟಿ ಕಾರ್ಡ್ ಇಟ್ಟು ಆಶೀರ್ವಾದ ಪಡೆದಿದ್ದ ಕಾಂಗ್ರೆಸ್ ನಾಯಕರಿಂದ ಈಗ ಕೊಟ್ಟ ಮಾತು ನೆರವೇರಿಕೆ
ವಿಧಾನಸಭೆ ಚುನಾವಣೆಗೂ ಮೊದಲು ನಾಡದೇವಿ ಮೈಸೂರಿನ ಚಾಮುಂಡಿ ದೇವಿಯ ಎದುರು ರಾಜ್ಯ ಕಾಂಗ್ರೆಸ್ ನಾಯಕರಾದ ಮುಂದೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಕೆ.ಜೆ. ಜಾರ್ಜ್ ನಾನು, ಪಕ್ಷ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ನಡೆಸುವುದು ಗ್ಯಾರಂಟಿ ಎಂದು ಪ್ರಮಾಣವನ್ನು ಮಾಡಿದ್ದೆವು. ಈಗ ನಮ್ಮ ಸರ್ಕಾರ ಅದನ್ನು ಈಡೇರಿಸಿದೆ. ಇದೇ ಆಗಸ್ಟ್ 31ರಂದು ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ಮೈಸೂರಿನಲ್ಲಿ ಗೃಹ ಲಕ್ಷ್ಮಿ ಯೋಜನೆಗೂ ಚಾಲನೆ ನೀಡುವ ಮೂಲಕ ಅರ್ಹ ಮಹಿಳೆಯರ ಖಾತೆಗೆ 2 ಸಾವಿರ ರುಪಾಯಿಯನ್ನು ವರ್ಗಾವಣೆ ಮಾಡಲಾಗುತ್ತದೆ.
ಅಂದಿನ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಹಿರಿಯ ನಾಯಕ ಕೆ.ಜೆ.ಜಾರ್ಜ್ ಹಾಗೂ ವಿಧಾನ ಪರಿಷತ್ ಶಾಸಕನಾದ ನಾನು 2023ರ ಮೇ 9 ರಂದು ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿದ್ದೆವು. ಕನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ತನ್ನ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳ ಬಗ್ಗೆ ಮಾಹಿತಿ ಇದ್ದ ಕಾರ್ಡ್ಗಳನ್ನು ಚಾಮುಂಡಿ ದೇವಿಯ ಎದುರು ಇಟ್ಟು ಆಶೀರ್ವಾದ ಬೇಡಿದ್ದೆವು. ಅಲ್ಲದೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಪ್ರಮಾಣ ಮಾಡಿದ್ದೆವು. ಅದರಂತೆ ಮೇ 13 ರಂದು ವಿಧಾನಸಭೆ ಚುನಾವಣೆಯ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಪಕ್ಷ 135 ಸ್ಥಾನ ಗೆದ್ದುಕೊಂಡಿದೆ. ಬಹುಮತದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅಲ್ಲದೆ, ನಮ್ಮ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ನುಡಿದಂತೆ ನಡೆದಿದ್ದಾರೆ.
ಕಾಂಗ್ರೆಸ್ “ನುಡಿದಂತೆ ನಡೆಯುವ” ಪಕ್ಷ
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ನುಡಿದಂತೆ ನಡೆದಿದ್ದಾರೆ. ರಾಜ್ಯದ ಜನತೆಗೆ ನೀಡಿದ್ದ ವಾಗ್ದಾನವನ್ನು, ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮಾಡಿದ ಪ್ರಮಾಣವನ್ನು ಈಡೇರಿಸಿದ್ದಾರೆ. ಗ್ಯಾರಂಟಿಗಳನ್ನು ಕಾರ್ಯರೂಪಕ್ಕೆ ತರುತ್ತಿದ್ದಾರೆ. ಕಾಂಗ್ರೆಸ್ “ನುಡಿದಂತೆ ನಡೆಯುವ” ಪಕ್ಷವಾಗಿದೆ. ಕಾಂಗ್ರೆಸ್ ಸರ್ಕಾರ ಬಡವರು, ದೀನ, ದಲಿತರು, ಸಾಮಾನ್ಯ ವರ್ಗ ಹಾಗೂ ಸರ್ವರ ಏಳ್ಗೆಗೆ ಪಣ ತೊಟ್ಟಿದೆ ಎಂದಿದ್ದಾರೆ. ಆ ನಿಟ್ಟಿನಲ್ಲಿ ನಮ್ಮ ಕಾರ್ಯಚಟುವಟಿಕೆ ಸಾಗಿದೆ.
ಶಕ್ತಿ ಯೋಜನೆಗೆ ಭರ್ಜರಿ ಯಶ
ಮಹಿಳೆಯರು ರಾಜ್ಯಾದ್ಯಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ “ಶಕ್ತಿ” ಯೋಜನೆಯನ್ನು ದೇಶದಲ್ಲಿಯೇ ಮೊದಲ ಬಾರಿಗೆ ಜಾರಿಗೆ ತರಲಾಗಿದೆ. ಅದರಲ್ಲಿ ಶನಿವಾರದವರೆಗೆ (ಆಗಸ್ಟ್ 27) 46 ಕೋಟಿ 80 ಲಕ್ಷ ಮಹಿಳೆಯರು ಇದರ ಪ್ರಯೋಜನವನ್ನು ಪಡೆದಿದ್ದಾರೆ.
ಮನೆ ಬೆಳಗಿದ ಗೃಹಜ್ಯೋತಿ
ರಾಜ್ಯದ ಎಲ್ಲ ಕುಟುಂಬಗಳಿಗೆ ಮಾಸಿಕ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಯನ್ನು ಜುಲೈ ತಿಂಗಳಿಂದಲೇ ಜಾರಿಗೆ ತರಲಾಗಿದೆ. ಅದರಂತೆ ರಾಜ್ಯದಲ್ಲಿ 1,28,43,748 ಮನೆಗಳು ಈ ಶೂನ್ಯ ಬಿಲ್ ಸೌಲಭ್ಯವನ್ನು ಪಡೆದುಕೊಂಡಿವೆ. ಈ ಮೂಲಕ ಜನರ ಬಾಳಿಗೆ ನಮ್ಮ ಸರ್ಕಾರ ಬೆಳಕಾಗಿದೆ.
1.7 ಲಕ್ಷ ಕುಟುಂಬಗಳಿಗೆ ಅನ್ನಭಾಗ್ಯದ ಹಣ ಪಾವತಿ
ಅನ್ನ ಭಾಗ್ಯ ಯೋಜನೆಯಲ್ಲಿ ಪ್ರತಿ ವ್ಯಕ್ತಿಗೆ ಮಾಸಿಕ ತಲಾ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಲಾಗಿತ್ತು. ಅದರಂತೆ 5 ಕೆಜಿ ಅಕ್ಕಿ ಹಾಗೂ ಇನ್ನೂ ಐದು ಕೆಜಿಯ ಹಣ 170 ರೂ.ಗಳನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡುವ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆಯಲ್ಲಿ ರಾಜ್ಯಾದ್ಯಂತ 1.7 ಲಕ್ಷ ಕುಟುಂಬಗಳು ಪ್ರಯೋಜನ ಪಡೆದುಕೊಳ್ಳುತ್ತಿವೆ.
ಗೃಹಲಕ್ಷ್ಮಿಯರ ಖಾತೆಗೆ ಹಣ
ಈಗ ಪ್ರಮುಖವಾಗಿರುವ ಇನ್ನೊಂದು ಭರವಸೆಯಾದ ರಾಜ್ಯದ ಪ್ರತಿ ಮನೆಯ ಯಜಮಾನಿಗೆ ತಲಾ 2 ಸಾವಿರ ರೂ. ನೀಡುವ “ಗೃಹ ಲಕ್ಷ್ಮಿ” ಯೋಜನೆಯನ್ನು ಜಗನ್ಮಾತೆ ಮೈಸೂರಿನ ಚಾಮುಂಡಿ ದೇವಿಯ ಸನ್ನಿಧಿಯಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಆಗಸ್ಟ್ 30 ರಂದು ನೆರವೇರಿಸುತ್ತಿದ್ದಾರೆ.ಈಗಾಗಲೇ ಗೃಹ ಲಕ್ಷ್ಮೀ ಯೋಜನೆಯಡಿ ರಾಜ್ಯಾದ್ಯಂತ 1 ಕೋಟಿ 10 ಲಕ್ಷ ಕುಟುಂಬಗಳು ನೋಂದಣಿ ಮಾಡಿಕೊಂಡಿವೆ. ಶೀಘ್ರ ಅವರ ಖಾತೆಗಳಿಗೆ ಹಣ ಜಮಾ ಆಗಲಿವೆ. ಈ ಮೂಲಕ ಮಹಿಳೆಯ ಸ್ವಾವಲಂಬಿ ಬದುಕಿಗೆ ನಮ್ಮ ಸರ್ಕಾರ ಶ್ರೀಕಾರವನ್ನು ಹಾಕಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ಜನರ ಭರವಸೆಯನ್ನು ಗಳಿಸಿದ ಸರ್ಕಾರವಾಗಿದೆ. ಈಗಾಗಲೇ ನಾಲ್ಕು ಪ್ರಮುಖ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಜನರ ಆರ್ಥಿಕ ಸಂಕಷ್ಟಗಳಿಗೆ ಸ್ಪಂದಿಸಿದೆ. ಬೆಲೆ ಏರಿಕೆ, ನಿರುದ್ಯೋಗಗಳ ಮಧ್ಯೆ ಕಂಗೆಟ್ಟಿರುವ ನಾಗರಿಕರಿಗೆ ಆಶಾಕಿರಣವಾಗಿ ನಮ್ಮ ಕಾಂಗ್ರೆಸ್ ಸರ್ಕಾರ ಕಾಣುತ್ತಿದೆ. ಕಾಂಗ್ರೆಸ್ ಒಂದೇ ಎಲ್ಲದಕ್ಕೂ ಪರಿಹಾರ ಎಂಬ ನಿಟ್ಟಿನಲ್ಲಿ ಜನರು ನಮ್ಮ ಕಾರ್ಯವೈಖರಿಯನ್ನು ಮೆಚ್ಚಿದ್ದಾರೆ, ಮೆಚ್ಚುತ್ತಿದ್ದಾರೆ.
ದಿನೇಶ್ ಗೂಳಿಗೌಡ
ಶಾಸಕರು ವಿಧಾನ ಪರಿಷತ್,
ಉಪಾಧ್ಯಕ್ಷರು, ಕೆಪಿಸಿಸಿ ಮಾಧ್ಯಮ ಘಟಕ