ಕರ್ನಾಟಕ ಕಂಡಂತಹ ದಕ್ಷ ಪೊಲೀಸ್ ಅಧಿಕಾರಿ B.N. ಗರುಡಾಚಾರ್ ರವರು ಇಂದು ಮುಂಜಾನೆ 3.00 ಗಂಟೆಗೆ ನಿಧನರಾಗಿದ್ದಾರೆ.
ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬಿಂಡಿಗೇನವಿಲೆ ಗ್ರಾಮ ಮೂಲದವರಾದ ಶ್ರೀ ಬಿ.ಎನ್.ಗರುಡಾಚಾರ್ ರವರು ತಮ್ಮ ಶಿಕ್ಷಣವನ್ನು ಪೂರೈಸಿ, ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯ ಉನ್ನತ ಶ್ರೇಣಿಯ ಅಧಿಕಾರಿಯಾಗಿ ನೇಮಕಗೊಂಡು, ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ, ನಂತರ ಬೆಂಗಳೂರು ಜಿಲ್ಲೆಯ ಎಸ್.ಪಿ ಹಾಗೂ ಬೆಂಗಳೂರು ಮಹಾನಗರದ ಡಿ.ಸಿ.ಪಿ ಯಾಗಿ (8 ವರ್ಷಗಳು) ಮತ್ತು ಪೊಲೀಸ್ ಕಮಿಷನರ್ ಆಗಿ (4 ವರ್ಷ 2 ತಿಂಗಳು), ಪೊಲೀಸ್ ಡಿಜಿ/ಐಜಿಪಿ ಯಾಗಿ (3 ವರ್ಷ 8 ತಿಂಗಳು) ಸೇವೆ ಸಲ್ಲಿಸಿದರು.
ಇವರ ಕಾರ್ಯದಕ್ಷತೆಯನ್ನು ಮೆಚ್ಚಿ ಕರ್ನಾಟಕ ಸರ್ಕಾರವು ಕೆ.ಎ.ಟಿ ಯ ಸದಸ್ಯರಾಗಿ ಓರ್ವ ಐಪಿಎಸ್ ಅಧಿಕಾರಿಯನ್ನು ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ನೇಮಕ ಮಾಡಿತ್ತು.
ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಇವರ ದಕ್ಷತೆ ಮತ್ತು ಪ್ರಾಮಾಣಿಕತೆಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ವಿವಿಧ ಪುರಸ್ಕಾರಗಳನ್ನು ನೀಡಿ ಗೌರವಿಸಿದೆ.
ಇಂತಹ ಮಹಾನ್ ಚೇತನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥನೆ