sakhigeetha.com

Top 1 Women's Magazines & Publications

ಸುದ್ದಿ ಜಗತ್ತು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ: ಎ.ಪಿ. ರಂಗನಾಥ್ ಅವರಿಗೆ ಬೆಂಬಲ ಕೋರಿ ಶಿಕ್ಷಕರೊಂದಿಗೆ ಟಿ.ಎ. ಶರವಣ ಸಭೆ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ:

ಬೆಂಗಳೂರು: ಮುಂಬರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ, ಶಿಕ್ಷಕರು ಹಾಗೂ ಉಪನ್ಯಾಸಕರ ಬೆಂಬಲ ಕೋರುವ ಉದ್ದೇಶದಿಂದ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಅವರ ನೇತೃತ್ವದಲ್ಲಿ ಸಭೆ ನಡೆಯಿತು.

ಬಸವನಗುಡಿಯ ಶ್ರೀ ಸಾಯಿ ಪಾರ್ಟಿ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ, ಬಸವನಗುಡಿ, ಪದ್ಮನಾಭನಗರ ಮತ್ತು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಕಾಲೇಜುಗಳ ಮುಖಂಡರು ಹಾಗೂ ಪ್ರಮುಖರು ಭಾಗವಹಿಸಿದ್ದರು.

ಸಭೆಯಲ್ಲಿ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಭೇಟಿಯಾದ ಮುಖಂಡರು, ಮುಂಬರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಎಂಎಲ್‌ಸಿ ಚುನಾವಣೆಯಲ್ಲಿ ಎ.ಪಿ. ರಂಗನಾಥ್ ಅವರಿಗೆ ಬೆಂಬಲ ನೀಡುವಂತೆ ಹಾಗೂ ಪ್ರಥಮ ಪ್ರಾಶಸ್ತ್ಯದ ಮತ ಚಲಾಯಿಸುವಂತೆ ಮನವಿ ಮಾಡಿದರು.

ಶಿಕ್ಷಕರ ಹಕ್ಕುಗಳು, ಹಿತಾಸಕ್ತಿಗಳ ರಕ್ಷಣೆ ಹಾಗೂ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುವ ಸಂಕಲ್ಪಕ್ಕೆ ಶಿಕ್ಷಕ ಬಾಂಧವರ ಸಹಕಾರ ಮತ್ತು ಪ್ರೋತ್ಸಾಹ ಅಗತ್ಯವಾಗಿದೆ ಎಂದು ಟಿ.ಎ. ಶರವಣ ಹೇಳಿದರು.

ಮುಂಬರುವ ಅಕ್ಟೋಬರ್ 23, 2026ರಂದು ನಡೆಯಲಿರುವ ಚುನಾವಣೆಯಲ್ಲಿ ಎ.ಪಿ. ರಂಗನಾಥ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಬೆಂಬಲಿಸುವಂತೆ ಸಭೆಯಲ್ಲಿ ಮನವಿ ಮಾಡಲಾಯಿತು.

ಶಿಕ್ಷಕರ ಸಮಸ್ಯೆಗಳು, ಅವರ ಹಕ್ಕುಗಳು ಮತ್ತು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳನ್ನು ಮುಂದಿಟ್ಟುಕೊಂಡು ಶಿಕ್ಷಕ ಸಮುದಾಯದೊಂದಿಗೆ ಸಂಪರ್ಕ ಸಾಧಿಸುವ ಪ್ರಯತ್ನವಾಗಿ ಈ ಸಭೆ ನಡೆಯಿತು.

Leave a Reply

Your email address will not be published. Required fields are marked *