sakhigeetha.com

Top 1 Women's Magazines & Publications

Latest:
Politics

ವಯನಾಡಿಗೆ ರೂ.೧೦ ಕೋಟಿ ನೆರವು: ವಿರೋಧ ಪಕ್ಷಗಳ ತೀವ್ರ ಆಕ್ರೋಶ

Bengalure: ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ಕೇರಳದ ವಯನಾಡಿಗೆ ಹೆಚ್ಚುವರಿಯಾಗಿ ರೂ. ೧೦ ಕೋಟಿ ನೆರವು ಘೋಷಿಸಿದ ಬೆನ್ನಲ್ಲೇ ತೀವ್ರ ಟೀಕೆಗೆ ಗುರಿಯಾಗಿದೆ. ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಈ ನಿರ್ಧಾರವನ್ನು ಪ್ರಶ್ನಿಸಿವೆ. ರಾಜ್ಯದಲ್ಲೇ ಕುಡಿಯುವ ನೀರಿನ ಸಮಸ್ಯೆ, ರೈತರ ಬವಣೆ ಇರುವಾಗ ವಯನಾಡಿಗೆ ಹಣ ಕೊಡುವುದು ಸೂಕ್ತವಲ್ಲ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಕನ್ನಡಿಗರ ತೆರಿಗೆ ಹಣವನ್ನು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಕ್ಷೇತ್ರದ ‘ರಾಜಕೀಯ ಲಾಭ’ಕ್ಕಾಗಿ ಬಳಸಲಾಗುತ್ತಿದೆ ಎಂದು ಟೀಕಿಸಿದ್ದಾರೆ. ಈ ಕುರಿತು ಸರ್ಕಾರ ಇನ್ನೂ ಸ್ಪಷ್ಟನೆ ನೀಡಿಲ್ಲ.

Leave a Reply

Your email address will not be published. Required fields are marked *