ಕರ್ನಾಟಕದಾದ್ಯಂತ ಮುಂದಿನ 4 ದಿನ ಭಾರಿ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್! ಜುಲೈ 6 ರಿಂದ ಜುಲೈ 9 ರವರೆಗೆ ರಾಜ್ಯಾದ್ಯಂತ ಭಾರಿ ಇಂದ ಅತಿ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ
ರಾಜ್ಯದಲ್ಲಿ ಮುಂಗಾರು ಮಾರುತಗಳು ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಇವತ್ತು ಜುಲೈ 6 ರಿಂದ ಜುಲೈ 9 ರವರೆಗೆ ರಾಜ್ಯಾದ್ಯಂತ ಭಾರಿ ಇಂದ ಅತಿ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದೆ.
ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಲಿದ್ದು, ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯಾವ ಜಿಲ್ಲೆಗಳಿಗೆ ಹೈ ಅಲರ್ಟ್?
- ಕರಾವಳಿ ಜಿಲ್ಲೆಗಳು: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 9 ರವರೆಗೆ ‘ಅತಿ ಭಾರಿ ಮಳೆ’ (Extremely Heavy Rain) ಬೀಳುವ ಸಾಧ್ಯತೆ ಇರುವುದರಿಂದ ಹೈ ಅಲರ್ಟ್ ಘೋಷಿಸಲಾಗಿದೆ. ಕಡಲ ತೀರಕ್ಕೆ ಪ್ರವಾಸಿಗರು ಹಾಗೂ ಮೀನುಗಾರರು ಹೋಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಮಲೆನಾಡು ಮತ್ತು ಒಳನಾಡು: ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಜುಲೈ 10 ರವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದ್ದು, ಗುಡುಗು ಸಿಡಿಲು ಸಹಿತ ಗಾಳಿ ಬೀಸಲಿದೆ.
ಸಾರ್ವಜನಿಕರಿಗೆ ಜಿಲ್ಲಾಡಳಿತದ ಸೂಚನೆ:
ಧಾರಾಕಾರ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಮತ್ತು ಭೂಕುಸಿತದ ಭೀತಿ ಎದುರಾಗಿದೆ. ತುರ್ತು ಪರಿಸ್ಥಿತಿ ಎದುರಿಸಲು ಆಯಾ ಜಿಲ್ಲಾಡಳಿತಗಳು ಕಂಟ್ರೋಲ್ ರೂಮ್‌ಗಳನ್ನು ತೆರೆದಿದ್ದು, ಸಾರ್ವಜನಿಕರು ಅನಗತ್ಯವಾಗಿ ನದಿ ಹಾಗೂ ಜಲಪಾತಗಳ ಬಳಿ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
