ಮಾವಳ್ಳಿಯ ಶ್ರೀ ಮಾರಮ್ಮ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ. ಉದಯ್ ಬಿ. ಗರುಡಾಚಾರ್ ದಂಪತಿ
ಡಾ ಉದಯ್ ಬಿ ಗರುಡಾಚಾರ್
ಮಾವಳ್ಳಿಯ ಶ್ರೀ ಮಾರಮ್ಮ ದೇವಿ ದೇವಸ್ಥಾನದಲ್ಲಿ ಆಷಾಢ ಮಾಸದ ವಿಶೇಷ ಪೂಜೆ: ಶಾಸಕ ಡಾ. ಉದಯ್ ಬಿ. ಗರುಡಾಚಾರ್ ಭಾಗಿ
ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮಾವಳ್ಳಿ ಭಾಗದಲ್ಲಿರುವ ಪ್ರಸಿದ್ಧ ಶ್ರೀ ಮಾರಮ್ಮ ದೇವಿ ದೇವಸ್ಥಾನದಲ್ಲಿ ಆಷಾಢ ಮಾಸದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಚಿಕ್ಕಪೇಟೆ ಕ್ಷೇತ್ರದ ಶಾಸಕರಾದ ಡಾ. ಉದಯ್ ಬಿ. ಗರುಡಾಚಾರ್ ಹಾಗೂ ಶ್ರೀಮತಿ ಮೇದಿನಿ ಉದಯ್ ಗರುಡಾಚಾರ್ ಅವರು ಈ ವಿಶೇಷ ಪೂಜೆಯಲ್ಲಿ ಭಾಗವಹಿಸಿ, ದೇವಿಗೆ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, “ನಾಡಿನ ಸಮಸ್ತ ಜನರ ಸುಖ, ಶಾಂತಿ, ಸಮೃದ್ಧಿ ಹಾಗೂ ಲೋಕಕಲ್ಯಾಣಕ್ಕಾಗಿ ದೇವಿಯಲ್ಲಿ ಪ್ರಾರ್ಥಿಸಲಾಗಿದೆ” ಎಂದು ತಿಳಿಸಿದರು.
ಈ ಪೂಜಾ ಕಾರ್ಯಕ್ರಮದಲ್ಲಿ ಗರುಡ ಫೌಂಡೇಶನ್‌ನ ಮುಖ್ಯಸ್ಥರಾದ ಶ್ರೀಮತಿ ಮೇದಿನಿ ಉದಯ್ ಗರುಡಾಚಾರ್, ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಅನಿಲ್ ಕುಮಾರ್, ಚಿಕ್ಕಪೇಟೆ ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಶ್ರೀನಿವಾಸ್, ವಾರ್ಡ್ ಬಿಜೆಪಿ ಅಧ್ಯಕ್ಷರಾದ ಶ್ರೀ ಹೇಮಂತ್ ಕುಮಾರ್, ಹಿರಿಯ ಮುಖಂಡರಾದ ಶ್ರೀ ಮಾರಿಮುತ್ತು, ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಕೌಸಲ್ಯ ಸೇರಿದಂತೆ ಹಲವು ಸ್ಥಳೀಯ ಮುಖಂಡರು ಹಾಗೂ ಭಾಗದ ನಿವಾಸಿಗಳು ಉಪಸ್ಥಿತರಿದ್ದರು.
