ವಿನಯ್ ಕುಲಕರ್ಣಿ ಜಾಮೀನು ರದ್ದು – ಮುಂದಿನ ಎರಡು ವಾರಗಳಲ್ಲಿ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶ!
ವಿನಯ್ ಕುಲಕರ್ಣಿ ಜಾಮೀನು ರದ್ದು ಯೋಗೇಶ್ ಗೌಡ ಪ್ರಕರಣ (Vinay Kulkarni Bail Cancelled Yogesh Gowda Case Kannada)
ಬೆಂಗಳೂರು: ಯೋಗೇಶ್ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ. ಅಲ್ಲದೆ, ಮುಂದಿನ ಎರಡು ವಾರಗಳ ಒಳಗಾಗಿ ಸಂಬಂಧಪಟ್ಟ ಪ್ರಾಧಿಕಾರದ ಮುಂದೆ ಶರಣಾಗುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಈ ಬೆಳವಣಿಗೆಯು ಪ್ರಕರಣದ ಕಾನೂನು ಹೋರಾಟದಲ್ಲಿ ಮಹತ್ವದ ತಿರುವು ಪಡೆದುಕೊಂಡಿದ್ದು, ಮುಂದಿನ ಕಾನೂನು ಕ್ರಮಗಳು ಹಾಗೂ ಪ್ರಕರಣದ ವಿಚಾರಣೆಯತ್ತ ಎಲ್ಲರ ಗಮನ ನೆಟ್ಟಿದೆ.
