ಹಿರಿಯ ಲೇಖಕಿ ಹಾಗೂ ಸಖೀಗೀತ ಮಾಸ ಪತ್ರಿಕೆಯ ಗೌರವ ಸಂಪಾದಕರೂ ಆಗಿರುವ ಶ್ರೀಮತಿ ಕಿರಣ್ ಪ್ರಸಾದ್ ರಾಜನಹಳ್ಳಿ ರವರಿಗೆ ‘ವನಿತಾ ಸಾಹಿತ್ಯಶ್ರೀ’ ಪ್ರಶಸ್ತಿ ಪ್ರದಾನ!
ಕಿರಣ್ ಪ್ರಸಾದ್ ರಾಜನಹಳ್ಳಿ ವನಿತಾ ಸಾಹಿತ್ಯಶ್ರೀ ಪ್ರಶಸ್ತಿ (Kiran Prasad Rajanahally Vanitha Sahityashree Award Kannada)
ದಾವಣಗೆರೆ: ನಗರದ ಪಿ.ಜೆ. ಬಡಾವಣೆಯ ವನಿತಾ ಸಮಾಜದಲ್ಲಿ ನವೆಂಬರ್ 23ರಂದು ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಖ್ಯಾತ ಲೇಖಕಿ ಕಿರಣ್ ಪ್ರಸಾದ್ ರಾಜನಹಳ್ಳಿ ಅವರಿಗೆ ‘ವನಿತಾ ಸಾಹಿತ್ಯಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕನ್ನಡ ಸಾಹಿತ್ಯ ಮತ್ತು ಬರವಣಿಗೆ ಕ್ಷೇತ್ರದಲ್ಲಿನ ಅವರ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗಿದ್ದು, ಕನ್ನಡ ರಾಜ್ಯೋತ್ಸವದ ಸಡಗರದಲ್ಲಿ ನಡೆದ ಈ ಸಮಾರಂಭವು ಸಾಹಿತ್ಯಾಸಕ್ತರು ಹಾಗೂ ಗಣ್ಯರ ಸಮ್ಮುಖದಲ್ಲಿ ಅರ್ಥಪೂರ್ಣವಾಗಿ ಜರುಗಿತು.
